ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಪುಲಿಕೇಶಿ ನಗರದ ಡೆವೀಸ್ ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಸ್ಫೋಟದ ತೀವ್ರತೆಗೆ ಮನೆ ಸಂಪೂರ್ಣ ನಾಶವಾಗಿದೆ. ಇಂದು ಮುಂಜಾನೆ 5 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ.
ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು ಮುನ್ನೆಚೆರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಇನ್ನು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗ್ತಿದೆ.