August 13, 2026
Thursday, August 13, 2026
spot_img

ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ; 10ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಬಳಿಯಿರುವ ಪೇಯಿಂಗ್ ಗೆಸ್ಟ್ (PG) ಒಂದರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದ ಪರಿಣಾಮ10ಕ್ಕೂ ಹೆಚ್ಚು ನಿವಾಸಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬೆಳ್ಳಂಬೆಳಗ್ಗೆ ಸಂಭವಿಸಿದ ದುರಂತ

ಇಂದು ಗುರುವಾರ (ಜುಲೈ 23) ಮುಂಜಾನೆ ಸುಮಾರು 6 ಗಂಟೆಗೆ ಅಡುಗೆ ತಯಾರಿಸುವ ಸಮಯದಲ್ಲಿ ಈ ಸ್ಫೋಟ ಸಂಭವಿಸಿದೆ. ಸಿಲಿಂಡರ್ ಸೋರಿಕೆಯೇ ಈ ದುರಂತಕ್ಕೆ ಕಾರಣ ಎನ್ನಲಾಗುತ್ತಿದ್ದು, ಸ್ಫೋಟದ ತೀವ್ರತೆಗೆ ಪಿಜಿ ಕಟ್ಟಡದ ಒಳಗಿದ್ದ ಸಾಮಗ್ರಿಗಳು ಧ್ವಂಸಗೊಂಡಿವೆ. ಹಠಾತ್ ಸಂಭವಿಸಿದ ಈ ಘಟನೆಯಿಂದಾಗಿ ಪಿಜಿ ನಿವಾಸಿಗಳು ದಿಕ್ಕಾಪಾಲಾಗಿ ಓಡಿದ್ದಾರೆ.

ಇದನ್ನೂ ಓದಿ:

ಗೇಟ್ ಮುಂಭಾಗದಲ್ಲೇ ಗಾಯಾಳುಗಳ ಆಕ್ರಂದನ

ಸ್ಫೋಟದ ತೀವ್ರತೆಗೆ ಸುಟ್ಟ ಗಾಯಗಳಾಗಿದ್ದ 10ಕ್ಕೂ ಹೆಚ್ಚು ಜನರು ರಕ್ಷಣೆಗಾಗಿ ಕಿರುಚಾಡುತ್ತಾ ಪಿಜಿಯ ಮುಖ್ಯ ಗೇಟ್ ಮುಂಭಾಗದಲ್ಲೇ ಬಿದ್ದು ನರಳಾಡಿದ್ದಾರೆ. ಸ್ಥಳೀಯರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಸದ್ಯ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !