ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಚಿನ್ನಪ್ಪಂಪಟ್ಟಿಯಲ್ಲಿ ಹೆದ್ದಾರಿ ಕಾಮಗಾರಿ ವೇಳೆ ಟ್ರಕ್‌ನಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.
ಚತುಷ್ಪಥ ಹೆದ್ದಾರಿ ವೈಟ್ ಲೈನ್ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಟ್ರಕ್‌ನಲ್ಲಿ ಇರಿಸಲಾಗಿದ್ದ ಸಿಲಿಂಡರ್ ಸ್ಫೋಟಗೊಂಡಿದೆ.
ಕಾರ್ಮಿಕರಿದ್ದ ಸ್ವಲ್ಪ ದೂರದಲ್ಲೇ ಈ ಸ್ಫೋಟ ಸಂಭವಿಸಿದ್ದು, ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಹಾಗೂ ಗಾಯಗಳು ವರದಿಯಾಗಿಲ್ಲ