ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಉತ್ತರ ಪ್ರದೇಶದಲ್ಲಿ ಬುಧವಾರದಂದು ಆಮ್ಲಜನಕ ಘಟಕದಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಉಳಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ನಗರದ ಚಿನ್ಹಾಟ್ ಪ್ರದೇಶದ ಆಮ್ಲಜನಕ ಸ್ಥಾವರದಲ್ಲಿ ಈ ದುರ್ಘಟನೆ ನಡೆದಿದೆ ಎಂದು ಸ್ಟೇಷನ್ ಹೌಸ್ ಅಧಿಕಾರಿ ಧನಂಜಯ್ ಪಾಂಡೆ ತಿಳಿಸಿದ್ದಾರೆ. ಸ್ಥಳದಲ್ಲೇ ಸಾವನ್ನಪ್ಪಿದವರ ಗುರುತು ಪತ್ತೆಯಾಗಿಲ್ಲ. ಗಾಯಗೊಂಡಿರುವ ಆರು ಮಂದಿಯನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಈಗಾಗಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದು, ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.