ಡಿ.8 ಭಾನುವಾರ ನಮ್ಮ ಮೆಟ್ರೋ ಸಂಚಾರ ಸಮಯದಲ್ಲಿ ವ್ಯತ್ಯಯ, ಕಾರಣ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡಿ.8 ರಂದು ಕರ್ನಾಟಕ ಲೋಕಸೇವಾ ಆಯೋಗದ ಪಿಡಿಒ ಪರೀಕ್ಷೆ ನಡೆಯಲಿದೆ. ಅದಕ್ಕಾಗಿಯೇ ಮೆಟ್ರೋ ಪ್ರಯಾಣದ ಸಮಯವನ್ನು ಬದಲಾಯಿಸುವ ಮೂಲಕ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ.

ಭಾನುವಾರ ಬೆಳಿಗ್ಗೆ 7 ಗಂಟೆ ಬದಲಾಗಿ, ಬೆಳಿಗ್ಗೆ 5:30 ರಿಂದ ಮೆಟ್ರೋ ರೈಲುಗಳ ಸಂಚಾರ ಆರಂಭಗೊಳ್ಳಲಿದೆ.

ಮೆಟ್ರೋ ರೈಲುಗಳ ಸಂಚಾರ ಪ್ರತಿ ಭಾನುವಾರ ಬೆಳಿಗ್ಗೆ 7 ಗಂಟೆಗೆ ಹೊರಡುತ್ತದೆ. ಆದರೆ, ಪಿಡಿಒ ಪರೀಕ್ಷೆ ಹಿನ್ನೆಲೆ ಬೆಂಗಳೂರು ಮೆಟ್ರೊ ರೈಲು ನಿಗಮವು ಮಾಧ್ಯಮ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಮೆಟ್ರೋ ಸೇವೆಯು ಬೆಳಿಗ್ಗೆ 5:30 ಕ್ಕೆ ಪ್ರಾರಂಭವಾಗಲಿದೆ ಎಂದು ತಿಳಿಸಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!