ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀರಂಗಪಟ್ಟಣದಲ್ಲಿ ನಡೆದ ಬೆಳ್ಳಿ ಪರ್ವ ಕಾರ್ಯಕ್ರಮದಲ್ಲಿ ನಟ ದರ್ಶನ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ. ಇದು ಸಾಕಷ್ಟು ವಿವಾದಕ್ಕೂ ಕಾರಣವಾಗಿತ್ತು. ಇದೀಗ ಇದ್ದಕ್ಕಿದ್ದಂತೆ ಅಂತರ್ಜಾಲದಲ್ಲಿ ದರ್ಶನ್ ತಮ್ಮ ಪತ್ನಿ ವಿಜಯಲಕ್ಷ್ಮಿ ಜೊತೆ ಸಕತ್ ಡಾನ್ಸ್ ಮಾಡಿರುವ ವಿಡಿಯೋವೊಂದು ಬಿಡುಗಡೆಯಾಗಿದೆ.
ಇದುವರೆಗೂ ದರ್ಶನ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ವಿವಾದಗಳ ನಡುವೆಯೂ ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಪತ್ನಿ ವಿಜಯಲಕ್ಷ್ಮಿ ಜೊತೆ ದರ್ಶನ್ ಡ್ಯಾನ್ಸ್ ಮಾಡಿದ್ದಾರೆ. ವಿಜಯಲಕ್ಷ್ಮಿ ಜತೆ ವೇದಿಕೆ ಮೇಲೆ ತೆರಳಿ ಹೆಜ್ಜೆ ಹಾಕಿದ್ದಾರೆ.
ಈ ವಿಡಿಯೋ ಈಗ ವೈರಲ್ ಆಗುತ್ತಿದ್ದು. “ಬಾಸ್ ಅತ್ತಿಗೆ ಡ್ಯಾನ್ಸ್ ಸೂಪರ್” ಎಂದು ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.