ಹೊಸದಿಗಂತ ಮಂಗಳೂರು:
ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ಅಕ್ಟೋಬರ್ 21 ರಂದು ನಡೆದ ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು ಸಾಧಿಸಿದ್ದಾರೆ.
1600 ಕ್ಕೂ ಅಧಿಕ ಮತಗಳ ಅಂತರದಿಂದ ಕಿಶೋರ್ ಕುಮಾರ್ ಗೆಲುವು ಸಾಧಿಸಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಸೇರಿದಂತೆ ಒಟ್ಟು ನಾಲ್ಕು ಮಂದಿ ಕಣದಲ್ಲಿದ್ದರು. ಕೋಟ ಶ್ರೀನಿವಾಸ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಈ ಚುನಾವಣೆ ನಡೆದಿತ್ತು.