ದ.ಕ. ಜಿಲ್ಲಾಧಿಕಾರಿ ರವಿ ಕುಮಾರ್ ವರ್ಗಾವಣೆ: ನೂತನ ಡಿಸಿಯಾಗಿ ಮುಲ್ಲೈ ಮುಹಿಲನ್ ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ.

ಇದರ ಜೊತೆಗೆ ದ.ಕ. ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಡಾ. ಕುಮಾರ ಅವರು ವರ್ಗಾವಣೆಗೊಂಡಿದ್ದು,ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.

ನೂತನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್‌ಎನ್‌ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್ ವಿಷಯದಲ್ಲಿ ಪದವಿ ಪಡೆದಿದ್ದಾರೆ.1986 ರಲ್ಲಿ ಜನಿಸಿದ ಅವರು 2013 ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!