ಡಿ.ಕೆ. ಸುರೇಶ್ ಸೋಲಿಗೆ ಇವರೇ ಕಾರಣ: ಸ್ಫೋಟಕ ಹೇಳಿಕೆ ನೀಡಿದ ಬಿಜೆಪಿ ನಾಯಕ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ ಎಂದು ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕರ್ನಾಟಕದಲ್ಲಿ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು ಎಂದು ಒಂದು ಅಹಿಂದ ಟೀಮ್ ಯಾವಾಗಲೂ ಕೆಲಸ ಮಾಡುತ್ತದೆ. ಅವರು ಡಿ.ಕೆ. ಸುರೇಶ್ ಅವರನ್ನು ಸೋಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಕುರಿತು ನಾನು ಈ ಹಿಂದೆಯೂ ಹೇಳಿದ್ದೆ, ಸತೀಶ್ ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ, ಸಿದ್ದರಾಮಯ್ಯ ಇಷ್ಟೂ ಜನ ಸೇರಿ ಡಿ.ಕೆ. ಸುರೇಶ್ ಅವರನ್ನು ಸೋಲಿಸುತ್ತಾರೆ ಎಂದು. ಈಗ ನೋಡಿ ನಾನು ಹೇಳಿದಂತೆಯೇ ನಡೆದಿದೆ. ಎರಡು ಲಕ್ಷ ಮತಗಳ ಅಂತರದಿಂದ ಸೋಲಿಸುತ್ತಾರೆ ಅಂತ ಹೇಳಿದ್ದೆ. ಅದಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಡಿ.ಕೆ. ಸುರೇಶ್‌ ಅವರನ್ನು ಸೋಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ಮುಂದೆ ಮುಖ್ಯಮಂತ್ರಿ ಆಗಬಾರದು, ಅವರ ನೈತಿಕತೆ ಕುಸಿಯಬೇಕು ಅಂತ ಹೀಗೆ ಮಾಡಿದ್ದಾರೆ. ಇದರಿಂದ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲ್ಲ, ಈ ಸರ್ಕಾರ ಉಳಿಯಲ್ಲ ಎಂಬುವುದು ಗೊತ್ತಾಗುತ್ತದೆ. ಇಲ್ಲಿಂದ ರಾಜಕೀಯ ಧ್ರುವೀಕರಣ ಪ್ರಾರಂಭ ಆಗುತ್ತದೆ, ಕಾಂಗ್ರೆಸ್‌ನಲ್ಲಿ ಒಳಜಗಳ ಶುರುವಾಗುತ್ತೆ. ಈಗಾಗಲೇ ಬೆಳಗಾವಿಯಲ್ಲಿ ಕಿತ್ತಾಟ ಶುರುವಾಗಿದೆ. ಬೆಂಗಳೂರು ಗ್ರಾಮಾಂತರದ ಸೋಲಿನಿಂದ ಇಲ್ಲಿಯೂ ಕೂಡ ಜಗಳ ಶುರುವಾಗಿದೆ, ಸರ್ಕಾರ ಪತನವಾಗುತ್ತೆ ಎಂದು ಹೇಳಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!