ಹೊಸದಿಗಂತ ಡಿಜಿಟಲ್ ಡೆಸ್ಕ್;
ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಜಾಲದ ಬಗ್ಗೆ ಬಿಸಿ, ಬಿಸಿ ಚರ್ಚೆಯಾಗಿದ್ದು, ಸಚಿವ ಕೆ.ಎನ್ ರಾಜಣ್ಣ ಅವರು ನನ್ನ ಮೇಲೆ ಹನಿಟ್ರ್ಯಾಪ್ ಪ್ರಯತ್ನ ಆಗಿರೋದು ನಿಜ ಎಂದು ಒಪ್ಪಿಕೊಂಡಿದ್ದಾರೆ.
ಇನ್ನ್ನು ಬಿಜೆಪಿ ಶಾಸಕ ಮುನಿರತ್ನ ಅವರು ರೋಷಾವೇಶದಲ್ಲಿ ಮಾತನಾಡಿದ್ದಾರೆ. ನನಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಂದ ಅನ್ಯಾಯ ಆಗಿದೆ. ನನ್ನ ವಿರುದ್ಧ ಅತ್ಯಾಚಾರದ ಕೇಸ್ ಹಾಕಿಸಿದ್ದಾರೆ. ನೀನು ರಾಜೀನಾಮೆ ಕೊಟ್ರೆ ಜಾತಿ ನಿಂದನೆ ಕೇಸ್ ವಾಪಸ್ ಪಡೆಯುತ್ತೇನೆ ಅಂತ ಹೇಳಿದ್ರು ಎಂದಿದ್ದಾರೆ.
ನಾನು ಕಾಂಗ್ರೆಸ್ನಿಂದ ಬಿಜೆಪಿಗೆ ಹೋದಾಗಲೇ ಪ್ರಯತ್ನ ಪಟ್ಟಿದ್ದಾರೆ. ಈಗ ರಾಜಣ್ಣಗೆ ಹನಿಟ್ರ್ಯಾಪ್ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಹೋಮ್ ಮಿನಿಸ್ಟರ್ ಈಗ ತನಿಖೆಗೆ ಆದೇಶಿಸುತ್ತೇನೆ ಎಂದಿದ್ದಾರೆ. ಇದನ್ನ ಇಲ್ಲಿಗೆ ನಿಲ್ಲಿಸಬೇಕು. ಇಲ್ಲದಿದ್ದರೆ ಎಲ್ಲ ಶಾಸಕರ ಜೀವನವನ್ನ ಹಾಳು ಮಾಡುತ್ತಾರೆ. ಈಗ ನನ್ನ ಜೀವನ ಹಾಳು ಮಾಡಿದ್ದಾರೆ ಎಂದು ದೇವರ ಫೋಟೋ ತೋರಿಸಿ ಶಾಸಕ ಮುನಿರತ್ನ ಭಾವುಕರಾದರು.
ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಹೆಚ್.ಡಿ ರೇವಣ್ಣ ಮೇಲೂ ಇದೇ ಕುತಂತ್ರ ಮಾಡಿದ್ರು. ಈಗ ಸಚಿವ ರಾಜಣ್ಣ ಅವರ ಮೇಲೆ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ಅವರಿಗೆ ಒಂದು ಕಿವಿಮಾತು ಹೇಳ್ತೀನಿ. ನಿಮ್ಮ ಹನಿಟ್ರ್ಯಾಪ್ ಟೀಂ ನನಗೆ ಗೊತ್ತಿದೆ. ನೀವು ರಾತ್ರಿ ಮಿಟೀಂಗ್ ಮಾಡಿದ್ದು ಗೊತ್ತಿದೆ. ಡಿ.ಕೆ ಶಿವಕುಮಾರ್ ಅವರಿಗೆ ಈ ಮಹಾ ಪಾಪದ ಕೆಲಸ ಯಾಕೆ ಬೇಕು? ಎಂದು ಮುನಿರತ್ನ ಪ್ರಶ್ನಿಸಿದ್ದಾರೆ.
ನನಗೆ ಆಗಿರುವ ನೋವನ್ನು ನಾನು ಹೇಳಿದ್ದೀನಿ. ಸಿಸಿಟಿವಿ, ಆಡಿಯೋ ಎಲ್ಲಾ ಸಾಕ್ಷಿಗಳು ಇವೆ. ರಮೇಶ್ ಜಾರಕಿಹೊಳಿ, ನಾನು ಕಾಂಗ್ರೆಸ್‌ನಲ್ಲಿ ಇದ್ದಿದ್ದು. ರಾಜಣ್ಣ ಸಹ ಕಾಂಗ್ರೆಸ್‌ನಲ್ಲಿ ಇರೋದು. ಇದು ಒಳ್ಳೆಯದು ಅಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಶಾಸಕ ಮುನಿರತ್ನ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನನ್ನ ಮೇಲೆ ಸುಳ್ಳು ಕೇಸ್ ಹಾಕಿದ್ದಾರೆ. ಅತ್ಯಾಚಾರ ಮಾಡಿದ್ದೇನೆ ಅಂತ ಆರೋಪ ಮಾಡಿದ್ದಾರೆ. 15 ವರ್ಷದ ನನ್ನ ಮೊಮ್ಮಕ್ಕಳು ಇದ್ದಾರೆ. ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮನೆ ಹಾಳು ಮಾಡಿದರು. ಶಾಸಕ ರಮೇಶ್ ಜಾರಕಿಹೊಳಿ ಮನೆ ಹಾಳು ಮಾಡಿದರು. ಈಗ ನನ್ನ ಮನೆ ಹಾಳು ಮಾಡಿದ್ದಾರೆ. ಮುಂದೆ ಬೇರೆ ಶಾಸಕರ ಮನೆಯನ್ನು ಹಾಳು ಮಾಡಬಾರದು ಎಂದಿದ್ದಾರೆ.