ಡಿ.ಕೆ.ಶಿವಕುಮಾರ್ ನಮ್ಮ ನಾಯಕರು, ಅವರ ಹೋರಾಟಕ್ಕೆ ಪ್ರತಿಫಲ ಸಿಗಬೇಕು: ಇಕ್ಬಾಲ್ ಹುಸೇನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡಿ.ಕೆ.ಶಿವಕುಮಾರ್ ನಮ್ಮ ನಾಯಕರು. ಅವರ ಶ್ರಮ, ಹೋರಾಟಕ್ಕೆ ಪ್ರತಿಫಲ ಸಿಗಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ಆ ಹೇಳಿಕೆಗೆ ಈಗಲೂ ನಾನು ಬದ್ಧವಾಗಿದ್ದೇನೆ. ಈಗಲೂ ನನ್ನ ಹೇಳಿಕೆಯನ್ನ ನಾನು ಸಮರ್ಥಿಸಿಕೊಳ್ಳುತ್ತೇನೆ. ಡಿಕೆಶಿಯವರಿಗೆ ಸ್ಥಾನಮಾನ, ಗೌರವ ಕೊಡಿ ಅಂತ ಕೇಳೋಕೆ ನನಗೆ ಹಕ್ಕಿಲ್ವಾ? ನಾನು ಈ ಜಿಲ್ಲೆಯಲ್ಲಿ ಹುಟ್ಟಿದ್ದೀನಿ, ಅವರು ನಮ್ಮ ಜೊತೆ ಹುಟ್ಟಿದ್ದಾರೆ. ಅವರ ಹೋರಾಟಕ್ಕೆ ಬೆಲೆ ಇಲ್ವಾ ಎಂದು ಪ್ರಶ್ನಿಸಿದ ಇಕ್ಬಾಲ್ ಹುಸೇನ್, ಪರೋಕ್ಷವಾಗಿ ಡಿಕೆಶಿಗೆ ಸಿಎಂ ಸ್ಥಾನ ಸಿಗಬೇಕು ಎಂದ್ರು ಆಗ್ರಹಿಸಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!