Thursday, September 4, 2025

ಹೆಬ್ಬಾಳದ ಹೊಸ ಮೇಲ್ಸೇತುವೆ ಮೇಲೆ ಡಿ.ಕೆ. ಶಿವಕುಮಾರ್ ಸ್ಕೂಟರ್ ಸವಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಹೆಬ್ಬಾಳದ ಹೊಸ ಮೇಲ್ಸೇತುವೆ ಮೇಲೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಸ್ಕೂಟರ್ ಓಡಿಸಿ ಗಮನ ಸೆಳೆದರು.

ಇಂದು ಬೆಳಗ್ಗೆ ಹೆಬ್ಬಾಳ ಬಳಿ ಬಿಡಿಎ ವತಿಯಿಂದ ನಿರ್ಮಿಸುತ್ತಿರುವ ಹೊಸ ಮೇಲ್ಸೇತುವೆ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು. ಬಳಿಕ ಹೊಸ ಫ್ಲೈಓವರ್ ಮೇಲೆಯೇ ಡಿಕೆಶಿ ಸ್ಕೂಟರ್ ರೈಡ್ ಮಾಡಿ ಖುಷಿ ಪಟ್ಟರು. ಡಿಕೆಶಿಯವರು ಈ ವೇಳೆ ಕಾರ್ಯಕರ್ತರೊಬ್ಬರಸ್ಕೂಟರ್ ಅನ್ನು ತಾವೇ ಓಡಿಸಿಕೊಂಡು ಹೊಸ ಫ್ಲೈಓವರ್ ಮೇಲೆ ಒಂದು ರೌಂಡ್ ಹೋಗಿ ಬಂದು ಎಲ್ಲರ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ