Sunday, December 10, 2023

Latest Posts

ಡಿ.ಕೆ.ಶಿವಕುಮಾರ್ ಗೆ ತಿರುಗೇಟು: ಮದುವೆ ಮನೆಯಲ್ಲೇ ಟಿಕೆಟ್ ಘೋಷಣೆ ಮಾಡಿದ ಸಿದ್ದು!

ಹೊಸದಿಗಂತ ವರದಿ, ಕೊಪ್ಪಳ:

ಒಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ್ದಾರೆ. ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಮದುವೆ ಮನೆಯಲ್ಲಿ ಕೊಪ್ಪಳ ಜಿಲ್ಲೆಯ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ. ಹೈಕಮಾಂಡ್ ಹೇಳುವ ಮುನ್ನವೇ ಟಿಕೆಟ್ ಘೋಷಣೆ ಎಷ್ಟು ಸರಿ ಎಂದು ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಭಾನುವಾರ ತಾಲೂಕಿನ ವಣಬಳ್ಳಾರಿ ಗ್ರಾಮದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಸಹೋದರ ಸಂಬಂಧಿಯೊಬ್ಬರ ಮದುವೆ ಕಾರ್ಯಕ್ರಮಕ್ಕೆ ಭಾಗಿಯಾಗಿದ್ದ ಸಿದ್ದರಾಮಯ್ಯ ರಾಜಕೀಯ ಭಾಷಣ ಮಾಡುವ ಮೂಲಕ ಕರ್ನಾಟಕ ರಾಜಕಾರಣದಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಕಿದ್ದಾರೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರಗೆ ಟಾಂಗ್ ಕೊಟ್ಟಿದ್ದಾರೆ.

ವಧು- ವರರಿಗೆ ಶುಭ ಕೋರಿದ ಸಿದ್ದರಾಮಯ್ಯ, ಅದೇ ವೇದಿಕೆ ಮೇಲೆ ರಾಜಕೀಯ ಭಾಷಣ ಶುರು ಮಾಡಿದರು‌. ಒಂದೆಡೆ ಕೊಪ್ಪಳ ಜಿಲ್ಲೆಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಅವಕಾಶಕ್ಕಾಗಿ ಅರ್ಜಿ ಸಲ್ಲಿಸುತ್ತಿದ್ದರೆ, ಇತ್ತ ಸಿದ್ದರಾಮಯ್ಯ ಕೊಪ್ಪಳದ ಕನಕಗಿರಿಗೆ ಶಿವರಾಜ ತಂಗಡಗಿ, ಕುಷ್ಟಗಿ ಅಮರೇಗೌಡ ಬಯ್ಯಾಪೂರ, ಯಲಬುರ್ಗಾಕ್ಕೆ ಬಸವರಾಜ ರಾಯರೆಡ್ಡಿ, ಕೊಪ್ಪಳಕ್ಕೆ ರಾಘವೇಂದ್ರ ಹಿಟ್ನಾಳ ಹಾಗೂ ಗಂಗಾವತಿ ಕ್ಷೇತ್ರದಿಂದ ಇಕ್ಬಾಲ್ ಅನ್ಸಾರಿಗೆ ಮತ ನೀಡುವಂತೆ ಸಿದ್ದರಾಮಯ್ಯ ಕರೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!