ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾರದ್ದೋ ಹೇಳಿಕೆ ಮೇಲೆ ಡಿ.ಕೆ. ಸುರೇಶ್ ಅವರನ್ನು ವಿಚಾರಣೆಗೆ ಕರೆದಿದ್ದಾರೆ. ಇದನ್ನು ಮಾಧ್ಯಮಗಳು ವೈಭವೀಕರಿಸುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಐಶ್ವರ್ಯಾ ಗೌಡ ಅವರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಸುರೇಶ್ ಅವರನ್ನು ಇಡಿ ವಿಚಾರಣೆ ಕರೆದಿರುವ ಬಗ್ಗೆ ಕೇಳಿದಾಗ, ಈ ಹಿಂದೆ ನನ್ನ ಮೇಲೂ ಇಡಿ ಪ್ರಕರಣ ದಾಖಲಿಸಿತ್ತು. ಅದು ಏನಾಯ್ತು? ನಮ್ಮ ರಕ್ಷಣೆಗೆ ಯಾರೂ ಬರಲಿಲ್ಲ. ಕೊನೆಗೆ ನಮಗೆ ರಕ್ಷಣೆ ನೀಡಿದ್ದು ನ್ಯಾಯಾಂಗ ವ್ಯವಸ್ಥೆ. ಜನಪ್ರತಿನಿಧಿಗಳು ತಮ್ಮ ಕ್ಷೇತ್ರದ ಜನ ಬಂದಾಗ ಅವರನ್ನು ಭೇಟಿ ಮಾಡುವು ಸಹಜ. ಇಡಿ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡಲು ಸುರೇಶ್ ತಯಾರಿದ್ದಾರೆ. ಮಾಧ್ಯಮಗಳು ಹೆಚ್ಚು ಆದ್ಯತೆ ನೀಡಬೇಕಾದ ಪ್ರಕರಣಗಳನ್ನು ಬಿಟ್ಟು, ಇದನ್ನು ಹೆಚ್ಚು ಬಿಂಬಿಸಲು ಮುಂದಾಗಿದ್ದೀರಿ. ಇದರ ಅಗತ್ಯವಿಲ್ಲ ಎಂದು ತಿಳಿಸಿದರು.