ನಾಮಪತ್ರ ಸಲ್ಲಿಕೆಗೂ ಮುನ್ನ ಗುರು-ಹಿರಿಯರ, ಮನೆದೇವರ ಆಶೀರ್ವಾದ ಪಡೆದ ಡಿ.ಕೆ.ಸುರೇಶ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ನೋಂದಣಿ ಕಾರ್ಯ ಇಂದು ಅಧಿಕೃತವಾಗಿ ಆರಂಭವಾಗಿದೆ. ಅದರಂತೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿದಿರುವ ಡಿಕೆ ಸುರೇಶ್ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಈ ಹಿನ್ನಲೆಯಲ್ಲಿ ಡಿ.ಕೆ.ಸುರೇಶ್ ಅವರು ಗುರು ಹಿರಿಯರು ಹಾಗೂ ಮನೆದೇವರ ಆಶೀರ್ವಾದ ಪಡೆದಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶುಭಕಾರ್ಯ ನಡೆಸಲು ನಿರ್ಧರಿಸಿದ್ದಾರೆ. ಅತ್ತಿಗೆ ಉಷಾ ಶಿವಕುಮಾರ್​ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು.

ಅಣ್ಣಾ ಶಿವಕುಮಾರ್ ಗೆ ಬಿ ಫಾರಂ ನೀಡಿ ಚುನಾವಣಾ ಗೆಲುವಿಗೆ ಪ್ರಾರ್ಥಿಸುವಂತೆ ಕೇಳಿಕೊಂಡಿದ್ದಾರೆ. ಕರ್ನಾಟಕದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಏಪ್ರಿಲ್ 26 ರಂದು ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!