ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಕರ್ತವ್ಯಕ್ಕೆ ಹಾಜರಾದರು.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೂತನ ಅವರು ನೇಮಕಾತಿ ಆದೇಶ ಪತ್ರ ಸ್ವೀಕರಿಸಿದರು.
ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಬಳಿಕ ಪ್ರವೀಣ್​ ಅವರ ಪತ್ನಿ ನೂತನಗೆ ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ ಸಿ ಗ್ರೂಪ್​​ ಹುದ್ದೆಗೆ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿನ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿಯಾಗಿ ನೂತನ ಅವರು ಕರ್ತವ್ಯ ನಿರ್ವಹಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!