ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದೆ. ಈ ಮೂಲಕ ಮತ್ತೆ ಇಡಿ ಸಂಕಷ್ಟ ಎದುರಾಗಿದೆ.
ಇಂದು ಬೆಳಗ್ಗೆ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಜಾರಿ ನಿರ್ದೇಶನಾಲಯದಿಂದ ನೋಟಿಸ್ ಕಳುಹಿಸಲಾಗಿದ್ದು, ನವೆಂಬರ್ 7 ರಂದು ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿದೆ. ಸನ್ಮಾನ ಕಾರ್ಯಕ್ರಮದ ಸಂದರ್ಭದಲ್ಲಿಯೇ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.