ಡಿ. ರೂಪಾ ವಿರುದ್ಧ ಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ ರೋಹಿಣಿ ಸಿಂಧೂರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಐಪಿಎಸ್ ಅಧಿಕಾರಿ ಡಿ. ರೂಪಾ (D Roopa) ವಿರುದ್ಧ ಇಂದು ನ್ಯಾಯಾಲಯದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri),ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಪತಿ ಸುಧೀರ್ ರೆಡ್ಡಿ (Sudhir Reddy) ಜೊತೆ 24ನೇ ಎಸಿಎಂಎಂ ಕೋರ್ಟ್‌ಗೆ (ACMM Court) ಹಾಜರಾಗಿದ್ದ ರೋಹಿಣಿ ಸಿಂಧೂರಿ, ತಡೆಯಾಜ್ಞೆ ಇದ್ದರೂ, ರೂಪಾ ಸಾಮಾಜಿಕ ಜಾಲತಾಣದಲ್ಲಿ (Social Media) ಪೋಸ್ಟ್ ಹಾಕುತ್ತಲೇ ಇದ್ದಾರೆ. ಅವಹೇಳನ ಬರವಣಿಗೆ ಪೋಸ್ಟ್ ಮಾಡುತ್ತಿದ್ದಾರೆ. ಕೆಲವೊಮ್ಮೆ ಮಾತನಾಡಿದ್ರೆ ಪರವಾಗಿಲ್ಲ, ಪದೇ ಪದೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಿದರು.

ರೋಹಿಣಿ ಹೇಳಿಕೆ ಆಧರಿಸಿ, ಡಿ.ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ ಕೋರ್ಟ್ ಮಾರ್ಚ್ 3ಕ್ಕೆ ವಿಚಾರಣೆ ಮುಂದೂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!