ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ದಾಬಸ್‌ಪೇಟೆ ಎಸ್ಕೆ ಸ್ಟೀಲ್ ಕಂಪನಿಯಲ್ಲಿ ಮೆಟಲ್ ಗ್ಯಾಸ್ ಬ್ಲಾಸ್ಟ್ ದುರಂತ ಸಂಭವಿಸಿದ್ದು, ಗಾಯಗೊಂಡಿದ್ದ ಇಬ್ಬರು ಕಾರ್ಮಿಕರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಬಿಹಾರ ಮೂಲದ ಅಶೋಕ್ ಕುಮಾರ್ (49) ಹಾಗೂ ಒಡಿಶಾ ಮೂಲದ ಮುಖೇಶ್ ಕುಮಾರ್(33) ಮೃತ ದುರ್ದೈವಿಗಳು. ಇನ್ನು ಘಟನೆಯಲ್ಲಿ ಸುಶೀಲ್ ಕುಮಾರ್ ಎಂಬುವವರಿಗೆ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರೆಸಲಾಗಿದೆ.
ಮೇ.17ರಂದು ದಾಬಸ್‌ಪೇಟೆ ಎಸ್ಕೆ ಸ್ಟೀಲ್ ಕಂಪನಿಯಲ್ಲಿ ಮೆಟಲ್ ಗ್ಯಾಸ್ ಬ್ಲಾಸ್ಟ್ ಆಗಿ ಮೂವರು ಗಾಯಗೊಂಡಿದ್ದರು. ಇಬ್ಬರು ಮೃತಪಟ್ಟಿದ್ದು ಓರ್ವರಿಗೆ ಚಿಕಿತ್ಸೆ ಮುಂದುವರೆದಿದೆ. ಸೂಪರ್ವೈಸರ್ ಪಪ್ಪುಯಾದವ್, ಆಡಳಿತ ಮಂಡಳಿ ವಿರುದ್ಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಕಲಂ 337,304a ರೀತ್ಯಾ ಪ್ರಕರಣ ದಾಖಲಾಗಿದೆ.