ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೇಲ್ ಸಿಗುತ್ತೆ, ಬೆಂಗಳೂರಿಗೆ ಬರ್ತೀನಿ ಎಂದು ಸ್ಯಾಂಡಲ್ ವುಡ್ ತಾರೆಯರಿಗೆ ನಟ ದರ್ಶನ್ ಸಂದೇಶ ರವಾನಿಸಿದ್ದಾರೆ.
ನಟ ದರ್ಶನ್ ಜಾಮೀನು ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಿರ್ಧಾರವಾಗಲಿದೆ. ನಟನಿಗೆ ಜಾಮೀನು ಸಿಗುತ್ತಾ? ಜೈಲು ಶಿಕ್ಷೆಯನ್ನು ಮುಂದುವರಿಸಬೇಕೇ ಅಥವಾ ಬೇಡವೇ ಎಂಬುದು ಇಂದು ನಿರ್ಧಾರವಾಗಲಿದೆ. ಆದರೆ ದರ್ಶನ್ ಮಾತ್ರ ಇಂದು ನನಗೆ ಬೇಲ್ ಸಿಕ್ಕೇ ಸಿಗುತ್ತೆ ಎಂಬ ವಿಶ್ವಾಸದಲ್ಲಿದ್ದಾರೆ. ಬೇಲ್ ಸಿಗುತ್ತೆ, ಬೆಂಗಳೂರಿಗೆ ಬರ್ತೀನಿ ಎಂದು ತನ್ನನ್ನು ನೋಡಲು ಬಂದ ಪತ್ನಿ ವಿಜಯಲಕ್ಷ್ಮಿ ಮೂಲಕ ಸ್ಯಾಂಡಲ್ ವುಡ್ ತಾರೆಯರಿಗೆ ನಟ ದರ್ಶನ್ ಸಂದೇಶ ರವಾನಿಸಿದ್ದಾರೆ.
ಕೊಲೆ ಆರೋಪಿ ದರ್ಶನ್ ಜಾಮೀನು ಭವಿಷ್ಯ ಇಂದು ಹೈಕೋರ್ಟ್ ನಲ್ಲಿ ತೀರ್ಪು ಹೊರಬೀಳಲಿದೆ. ದರ್ಶನ್‌ಗೆ ಜಾಮೀನು ಸಿಗುತ್ತಾ? ಬೆಂಗಳೂರಿಗೆ ಶಿಫ್ಟ್ ಆಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.