ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಶೀಘ್ರದಲ್ಲೇ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಲಿದ್ದಾರೆ.
ನಟ ದರ್ಶನ್ ತಮ್ಮ ಕುಟುಂಬ ಸದಸ್ಯರೊಂದಿಗೆ ಕೆಂಗೇರಿಯಲ್ಲಿರುವ ಬಿಜಿಎಸ್ ಆಸ್ಪತ್ರೆಗೆ ಹೊರಟಿದ್ದು, ಇಂದಿನಿಂದ ಚಿಕಿತ್ಸೆ ಪಡೆಯಲಿದ್ದಾರೆ.
ದರ್ಶನ್ ಆಗಮನದ ಸುದ್ದಿ ತಿಳಿದ ದರ್ಶನ್ ಅಭಿಮಾನಿಗಳು ಆಸ್ಪತ್ರೆಯತ್ತ ದೌಡಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.