ಪಾಕಿಸ್ತಾನದಲ್ಲಿ ರಾಕೆಟ್ ಲಾಂಚರ್‌ ಬಳಸಿ ಹಿಂದೂ ದೇವಾಲಯದ ಮೇಲೆ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪಾಕಿಸ್ತಾನದಲ್ಲಿ ಹಿಂದೂ ದೇವಾಲಯದ ಮೇಲೆ ದುಷ್ಕರ್ಮಿಗಳ ದಾಳಿ ಮುಂದುವರಿದಿದೆ. ದಕ್ಷಿಣ ಸಿಂಧ್​ ಪ್ರಾಂತ್ಯದ ಹಿಂದೂ ದೇವಾಲಯದ ಮೇಲೆ ದುಷ್ಕರ್ಮಿಗಳು ರಾಕೆಟ್ ಲಾಂಚರ್​ ಬಳಸಿ ದಾಳಿ ಮಾಡಿರುವ ಘಟನೆ ವರದಿಯಾಗಿದೆ.

ಕಾಶ್ಮೋರ್ ಪ್ರದೇಶದಲ್ಲಿರುವ ಹಿಂದೂ ದೇಗುಲದ ಮೇಲೆ ಭಾನುವಾರ ಮುಂಜಾನೆ ದಾಳಿ ನಡೆದಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ದಾಳಿ ವೇಳೆ ದೇಗುಲ ಮುಚ್ಚಿತ್ತು. ಅಲ್ಲದೆ ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಆದರೆ ಆ ಹೊತ್ತಿಗೆ ದಾಳಿಕೋರರು ಪರಾರಿಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ದಾಳಿಯಿಂದಾಗಿ ಯಾವುದೇ ರೀತಿಯ ಪ್ರಾಣಹಾನಿಯಾಗಿಲ್ಲ. ದಾಳಿ ನಡೆಸಿದ ದುಷ್ಕರ್ಮಿಗಳಿಗಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!