Tuesday, September 27, 2022

Latest Posts

‘ಕಾಲೇಜಿನ ಶುಲ್ಕ ಕಟ್ಟಲು ಅಪ್ಪ-ಅಮ್ಮ ಪಡುತ್ತಿರುವ ಕಷ್ಟ ನೋಡಲಾರೆ’ : ವಿದ್ಯಾರ್ಥಿ ಆತ್ಮಹತ್ಯೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ತೆಲಂಗಾಣದಲ್ಲಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೊಬ್ಬರು ಆತ್ಮಹತ್ಯಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿದ್ದು, ಶುಲ್ಕ ಭರಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಿಡಿಯೋ ಮಾಡಿದ್ದಾರೆ.
‘ಕಾಲೇಜು ಶುಲ್ಕ ಕಟ್ಟಲು ತಂದೆ-ತಾಯಿ ಸಿಕ್ಕಾಪಟ್ಟೆ ಕಷ್ಟ ಪಡುತ್ತಿದ್ದಾರೆ. ಇದನ್ನು ಕಣ್ಣಾರೆ ನೋಡಲು ಆಗುತ್ತಿಲ್ಲ. ಓದಲು ಕಷ್ಟವಾಗುತ್ತಿದೆ. ನನ್ನಿಂದ ನಿಮಗೆ ಇನ್ನುಮುಂದೆ ಯಾವುದೇ ತೊಂದರೆ ಆಗುವುದಿಲ್ಲ. ಇನ್ನೂ ಸಾಲದ ಸುಳಿಯಲ್ಲಿ ನಿಮ್ಮನ್ನು ಸಿಲುಕಿಸಲು ಮನಸ್ಸು ಒಪ್ಪುತ್ತಿಲ್ಲ ದಯವಿಟ್ಟು ಕ್ಷಮಿಸಿ’ ಎಂದಿದ್ದಾರೆ.
ಮೃತ ವಿದ್ಯಾರ್ಥಿಯ ತಂದೆ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ತಾಯಿ ದಿನಗೂಲಿ ಮಾಡುತ್ತಿದ್ದರು. ಪರೀಕ್ಷೆ ಶುಲ್ಕ ಭರ್ತಿಗೆ ಕಷ್ಟವಾಗುತ್ತಿದೆ ಎಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!