ನಟಿ ಆಶಾ ಪಾರೇಖ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿರಿಯ ನಟಿ ಆಶಾ ಪಾರೇಖ್ ಅವರು ಭಾರತದ ಅತ್ಯುನ್ನತ ಚಲನಚಿತ್ರ ಗೌರವವಾದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾತನಾಡಿದ್ದು, ಈ ಬಾರಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಆಶಾ ಪಾರೇಖ್ ಅವರಿಗೆ ನೀಡಿ ಗೌರವಿಸಲಾಗುವುದು ಎಂದಿದ್ದಾರೆ.

ಆಸ್ಮಾನ್ ಚಿತ್ರದ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ ಆಶಾ ಅವರು ದೋ ಬದನ್, ಉಪಕಾರ್, ಕಾರವಾನ್,ದಿಲ್ ದೇಕೆ ದೇಖೋ,ಜಬ್ ಪ್ಯಾರ್ ಕಿಸಿ ಸೆ ಹೋತಾ ಹೈ,ಫಿರ್ ವೋಹಿ ದಿಲ್ ಲಯಾ ಹೂನ್,ತೀಸ್ರಿ ಮಂಜಿಲ್,ಬಹರೋನ್ ಕೆ ಸಪ್ನೆ ಇನ್ನಿತರ ಚಿತ್ರಗಳಲ್ಲಿ ನಟಿಸಿದ್ದಾರೆ. ಕಳೆದ ವರ್ಷ ರಜನಿಕಾಂತ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!