Thursday, October 6, 2022

Latest Posts

ಮಹಾರಾಷ್ಟ್ರದಲ್ಲಿ ದಹಿ ಹಂಡಿ ಸಂಭ್ರಮಾಚರಣೆ: 24 ಮಂದಿಗೆ ಗಾಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮಹಾರಾಷ್ಟ್ರದಲ್ಲಿ ಅದ್ಧೂರಿಯಾಗಿ ದಹಿ ಹಂಡಿ ಸಂಭ್ರಮಾಚರಣೆ ಎಂದಿಗಿಂತಲೂ ಹೆಚ್ಚಾಗಿದೆ.
2 ವರ್ಷಗಳ ಬಳಿಕ ಮೊದಲ ಬಾರಿಗೆ ದಹಿ ಹಂಡಿ ಉತ್ಸವ ನಡೆಯುತ್ತಿದ್ದು, ಯುವಕರು ಅಲಂಕಾರ ಮಾಡಿಕೊಂಡು ಮೇಲೆ ಕಟ್ಟಿರುವ ಗಡಿಗೆಯನ್ನು ಮಾನವ ಪಿರಮಿಡ್ ಮೂಲಕ ಏರಿ ಒಡೆದು ಸಂಭ್ರಮಿಸುತ್ತಾರೆ.
ಈ ಬಾರಿ ನಡೆದ ದಹಿ ಹಂಡಿ ಕಾರ್ಯಕ್ರಮದಲ್ಲಿ ಅವಘಡ ಉಂಟಾಗಿ 24 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.
ಈ ಪೈಕಿ 19 ಮಂದಿಯನ್ನು ಚಿಕಿತ್ಸೆ ಬಳಿಕ ಡಿಸ್ಚಾರ್ಜ್ ಮಾಡಲಾಗಿದ್ದರೆ, ಐವರು ಇನ್ನೂ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ, ಚಿಕಿತ್ಸೆ ಪಡೆಯುತ್ತಿರುವವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!