ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಇನ್ಮುಂದೆ ಪ್ರತಿನಿತ್ಯ 10 ನಿಮಿಷಗಳ ಧ್ಯಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್
ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು, ಒತ್ತಡ ಮುಕ್ತವಾಗಿಸಲು ಶಿಕ್ಷಣ ಇಲಾಖೆ ಧ್ಯಾನದ ಮೊರೆ ಹೋಗಲು ನಿರ್ಧರಿಸಿದೆ. ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ 10 ನಿಮಿಷ ಧ್ಯಾನ ಮಾಡಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಅವರು, ಧ್ಯಾನ ಮಾಡುವ ಸಂಬಂಧ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ. ನಿತ್ಯ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ವಿದ್ಯಾರ್ಥಿಗಳು ಕಡ್ಡಾಯವಾಗಿ ಧ್ಯಾನ ಮಾಡಬೇಕು ಎಂದು ಸೂಚಿಸಿರುವ ಅವರು, ಇದಕ್ಕಾಗಿ ಸಮಯ ನಿಗದಿ ಮಾಡಲು ಸೂಚನೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದವರು ಶಾಲಾ-ಕಾಲೇಜುಗಳಲ್ಲಿ ಧ್ಯಾನ ಮಾಡಿಸುವಂತೆ ಬಿ.ಸಿ. ನಾಗೇಶ ಅವರಿಗೆ ಪತ್ರ ಬರೆದಿದ್ದರು.

ಟ್ವೀಟ್ ಮಾಡಿರುವ ಬಿ.ಸಿ ನಾಗೇಶ್ ಅವರು, ʼವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು, ಆರೋಗ್ಯ ವೃದ್ಧಿಸಲು, ಸದ್ವಿಚಾರ ಚಿಂತನೆ, ಒತ್ತಡಗಳಿಂದ ಮುಕ್ತವಾಗಿ ಜ್ಞಾನಾರ್ಜನೆ, ಉತ್ತಮ ಗುಣಗಳನ್ನು ರೂಢಿಸಿಕೊಳ್ಳುವ ಮೂಲಕ ವ್ಯಕ್ತಿತ್ವ ವಿಕಸನಕ್ಕಾಗಿ ಶಾಲೆಗಳು & ಪದವಿಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ 10 ನಿಮಿಷ ಧ್ಯಾನ ಮಾಡಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆʼ ಎಂದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!