ಹೊಸದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ.
19 ವರ್ಷದ ಯುವತಿಗೆ ಪಾಸಿಟಿವ್ ದೃಢಪಟ್ಟಿದ್ದು, ಆಕೆಗೆ ಯಾವುದೇ ರೋಗಲಕ್ಷಣಗಳು ಇಲ್ಲ. ಸೋಂಕಿತ ಯುವತಿ ಆರೋಗ್ಯವಾಗಿದ್ದು, ಯಾವುದೇ ಟ್ರಾವೆಲ್ ಹಿಸ್ಟರಿ ಹೊಂದಿಲ್ಲ ಎಂದು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈಗ ಒಮಿಕ್ರಾನ್ ಸೋಂಕಿತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.