Monday, August 8, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 218 ಮಂದಿಯಲ್ಲಿ ಕೋವಿಡ್ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 218 ಮಂದಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.
320 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಶನಿವಾರವೂ 9 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಶನಿವಾರ ಶೇ. 2.69 ಪಾಸಿಟಿವಿಟಿ ದರ ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 95229ಕ್ಕೆ ಏರಿಕೆಯಾಗಿದೆ. ಈ ಪೈಕಿ 2295 ಸಕ್ರಿಯ ಪ್ರಕರಣಗಳು. 91626 ಸೋಂಕಿತರು ಗುಣಮುಖರಾಗಿದ್ದಾರೆ. 1308 ಮಂದಿ ಮೃತಪಟ್ಟಿದ್ದಾರೆ.
ಶನಿವಾರ ಜಿಲ್ಲೆಯಲ್ಲಿ ಕಪ್ಪು ಶಿಲಿಂಧ್ರ ಸೋಂಕಿನ ಯಾವುದೇ ಹೊಸ ಪ್ರಕರಣ, ಸಾವು ವರದಿಯಾಗಿಲ್ಲ. ಜಿಲ್ಲೆಯಲ್ಲಿ ಪ್ರಸ್ತುತ ಬ್ಲ್ಯಾಕ್ ಫಂಗಸ್‌ನ 32 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಇದುವರೆಗೆ 79654 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 9719767 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ದ.ಕ. ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss