Thursday, August 18, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 226 ಮಂದಿಗೆ ಕೋವಿಡ್ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 226 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
106 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಮಂಗಳವಾರ ನಾಲ್ವರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮಂಗಳವಾರ ಜಿಲ್ಲೆಯಲ್ಲಿ ಶೇ. 2.27 ಪಾಸಿಟಿವಿಟಿ ದರ ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 111542 ಕ್ಕೆ ಏರಿಕೆಯಾಗಿದೆ. ಈ ಪೈಕಿ 2252 ಸಕ್ರಿಯ ಪ್ರಕರಣಗಳು. 107690 ಮಂದಿ ಗುಣಮುಖರಾಗಿದ್ದಾರೆ. 1600 ಸೋಂಕಿತರು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 86811 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 10573570ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!