ಹೊಸ ದಿಗಂತ ಡಿಜಿಟಲ್ ಡೆಸ್ಕ್ , ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ (ಏ.5) ಒಬ್ಬರಿಗೆ ಕೊರೋನ ಸೋಂಕು ದೃಢ ಪಟ್ಟಿದೆ ಎಂದು ಆರೋಗ್ಯ ಇಲಾಖೆ ಪ್ರಕಟಿಸಿದೆ.
ಇತ್ತೀಚಿಗೆ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಅದು ಹಲವು ದಿನಗಳಿಂದ ಒಂದಂಕೆಯಲ್ಲಿ ಮುಂದುವರಿದಿದೆ. ಮಂಗಳವಾರ ಒಬ್ಬರು ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ ಒಟ್ಟು 1,33,632 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. ಮಂಗಳವಾರ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,850 ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಡಿಎಚ್ಒ ಕಚೇರಿ ಮೂಲಗಳಿಂದ ತಿಳಿದು ಬಂದಿದೆ.
ದಕ್ಷಿಣ ಕನ್ನಡದಲ್ಲಿ ಸಕ್ರಿಯ ಪ್ರಕರಣಗಳು ಈಗ ಒಂದಂಕೆಯಲ್ಲಿ ಮುಂದುವರಿದಿದೆ. ಮಂಗಳವಾರ 7 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಶೇ.0.24 ಪಾಸಿಟಿವಿಟಿ ವರದಿಯಾಗಿದೆ.