ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 374 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………… 
ಹೊಸ ದಿಗಂತ ವರದಿ , ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 374 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.
ಸಾವಿನ ಸಂಖ್ಯೆ ಪ್ರತಿದಿನ ಅಧಿಕಗೊಳ್ಳುತ್ತಿದ್ದು, ಮಂಗಳವಾರವೂ 15 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 556 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಮಂಗಳವಾರ ಪಾಸಿಟಿವಿಟಿ ಪ್ರಮಾಣ ಶೇ.5.68 ದಾಖಲಾಗಿದೆ. ಜಿಲ್ಲೆಯಲ್ಲಿ ಈಗ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 89623ಕ್ಕೆ ಏರಿಕೆಯಾಗಿದೆ. ಈ ಪೈಕಿ 6820 ಸಕ್ರಿಯ ಪ್ರಕರಣಗಳು. 81723 ಮಂದಿ ಗುಣಮುಖರಾಗಿದ್ದಾರೆ. 1018ಮಂದಿ ಮೃತಪಟ್ಟಿದ್ದಾರೆ.
ಮಂಗಳವಾರ ಜಿಲ್ಲೆಯಲ್ಲಿ ಕಪ್ಪು ಶಿಲೀಂಧ್ರ ಸೋಂಕಿನ ಯಾವುದೇ ಹೊಸ ಪ್ರಕರಣ, ಸಾವು ವರದಿಯಾಗಿಲ್ಲ. ಒಬ್ಬರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 32 ಬ್ಲ್ಯಾಕ್ ಫಂಗಸ್ ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಇದುವರೆಗೆ 73066 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 8875317 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss