ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಮೊಬೈಲ್ ನಂಬರ್ ಹ್ಯಾಕ್

ಹೊಸದಿಗಂತ ವರದಿ,ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ‌.ವಿ ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದೆ.
8590710748 ನಂಬರಿನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು ಎಂದು ಎಚ್ಚರಿಸಲಾಗಿದೆ.
ಸದ್ರಿ ನಂಬರ್ ಜಿಲ್ಲಾಧಿಕಾರಿಯವರದ್ದು ಆಗಿರುವುದಿಲ್ಲ. ಆದ ಕಾರಣ ಯಾರೂ ಕೂಡ ಯಾವುದೇ ರೀತಿಯಲ್ಲಿ ಸಹಾಯ ಅಥವಾ ಹಣವನ್ನು ಆ ನಂಬರಿಗೆ ವರ್ಗಾಯಿಸ ಬೇಡಿ ಎಂದಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಜನತೆಯಲ್ಲಿ ಮನವಿ ಮಾಡಿದ್ದಾರೆ.
8590710748 ಈ ನಂಬರ್ ನಿಂದ ಯಾವುದೇ ರೀತಿಯ ಮನವಿ ಬಂದಲ್ಲಿ ಅದನ್ನು ಬ್ಲಾಕ್ ಮಾಡಿ ವರದಿ ಮಾಡುವಂತೆಯೂ ಅವರು ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!