October 17, 2026
Saturday, October 17, 2026
spot_img

ಮಳೆಯಾರ್ಭಟಕ್ಕೆ ನಲುಗಿದ ದಕ್ಷಿಣ ಕನ್ನಡ: ರೆಡ್ ಅಲಟ್೯ ಘೋಷಣೆ, ಅಲ್ಲಲ್ಲಿ ಪ್ರವಾಹ ಭೀತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಇಂದು ಮುಂಜಾನೆಯಿಂದಲೇ ಬಿಟ್ಟೂ ಬಿಟ್ಟು ಭಾರೀ ಮಳೆಯಾಗುತ್ತಿದೆ.

ಮಳೆಯೊಂದಿಗೆ ಗಾಳಿಯ ಆರ್ಭಟವೂ ಅಧಿಕವಾಗಿದ್ದು, ಅಲ್ಲಲ್ಲಿ ನೆರೆ ಭೀತಿ ಕಾಡುತ್ತಿದೆ. ಕೇಂದ್ರ ಹವಾಮಾನ ಇಲಾಖೆ ಮುಂದಿನ 24 ಗಂಟೆ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಿದೆ
ಇಂದು ಕೆಲವು ಕಡೆಗಳಲ್ಲಿ 204.5‌ಮಿಮೀ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಸಿಡಿಲಿನ ಆರ್ಭಟವೂ ಇರಲಿದೆ ಎಂದು ಎಚ್ಚರಿಕೆ ನೀಡಿದೆ.

ಎಲ್ಲೆಡೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯದ ಬಗ್ಗೆ ಕಣ್ಗಾವಲಿಟ್ಟಿದ್ದಾರೆ. ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಎಲ್ಲಾ ತಾಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ.

Must Read