Wednesday, August 17, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 114 ಮಂದಿಗೆ ಕೋವಿಡ್ ಸೋಂಕು ದೃಢ

 ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 114 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಮಂಗಳವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಇಬ್ಬರು ಮೃತ ಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
134 ಮಂದಿ ಸೋಂಕು ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ 1,143 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.1.33ಕ್ಕೆ ಏರಿಕೆ ಆಗಿದೆ.
ಜಿಲ್ಲೆಯಲ್ಲಿ ಈ ತನಕ ಒಟ್ಟು 1,13,406 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. 1,10,628 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 1,635 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.
ಈ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 87,462 ಮಾಸ್ಕ್ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿವೆ. ರೂ.1,06,38,870 ದಂಡ ವಸೂಲಿ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!