Saturday, July 2, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 224 ಮಂದಿಗೆ ಕೋವಿಡ್ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 224 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಮಂಗಳವಾರ 6 ಮಂದಿ ಮೃತ ಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
248 ಮಂದಿ ಸೋಂಕು ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ 2,322 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.2.6ಕ್ಕೆ ಏರಿಕೆಯಾಗಿದೆ.
ಈ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 86,248 ಮಾಸ್ಕ್ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿವೆ. ರೂ.1,04,80,120 ದಂಡ ವಸೂಲಿ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮಂಗಳವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss