Thursday, July 7, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 273 ಮಂದಿಗೆ ಕೊರೋನಾ ಪಾಸಿಟಿವ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 273 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
265 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ನಾಲ್ವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಮಂಗಳವಾರದ ಪಾಸಿಟಿವಿಟಿ ದರದ ವಿವರವನ್ನು ಜಿಲ್ಲಾಡಳಿತ ನೀಡಿಲ್ಲ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 1084466 ಕ್ಕೆ ಏರಿಕೆಯಾಗಿದೆ. ಈ ಪೈಕಿ 2890 ಸಕ್ರಿಯ ಪ್ರಕರಣಗಳು. 104034 ಮಂದಿ ಗುಣಮುಖರಾಗಿದ್ದಾರೆ. 1542 ಸೋಂಕಿತರು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 85674 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 10421720 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss