Monday, August 8, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇರಲಾಗಿದ್ದ ವಾರಾಂತ್ಯದ ಕರ್ಫ್ಯೂ ಸಡಲಿಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ವರದಿ, ಮಂಗಳೂರು:

ಕೋವಿಡ್ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇರಲಾಗಿದ್ದ ವಾರಾಂತ್ಯದ ಕರ್ಫ್ಯೂ ಸಡಲಿಕೆಯಾಗಲಿದೆ. ಈ ವಾರದಿಂದಲೇ ಕ್ರಮ ಜಾರಿಗೊಳಿಸಲಾಗುತ್ತದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತಿದ್ದ ಕೋವಿಡ್ ನಿಯಂತ್ರಿಸಲು ಹೇರಲಾಗಿದ್ದ ವಾರಾಂತ್ಯದ ಕರ್ಫ್ಯೂ ಸಡಿಲಗೊಳಿಸುವುದರಿಂದ ಸಾರ್ವಜನಿಕರ ಚಟುವಟಿಕೆಗಳಿಗೆ ಸಹಕಾರವಾಗಲಿದೆ. ಎಲ್ಲಾ ವರ್ಗದ ಜನರಿಗೂ ಸಹಕಾರವಾಗುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
ವಾರಾಂತ್ಯದ ಕರ್ಫ್ಯೂ ಸಡಿಲಗೊಳಿಸಿದರೂ ಸಾರ್ವಜನಿಕರು ತಮ್ಮ ಆರೋಗ್ಯದ ಸುರಕ್ಷತಾ ದೃಷ್ಟಿಯಿಂದ ಜಾಗರೂಕರಾಗಿರಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸುವ ನಿಟ್ಟಿನಲ್ಲಿ ಸ್ವಯಂಪ್ರೇರಿತರಾಗಿ ಆಡಳಿತ ವ್ಯವಸ್ಥೆಯೊಂದಿಗೆ ಕೈ ಜೋಡಿಸಬೇಕು. ನಿಯಮಾವಳಿಗಳ‌ ಸಡಿಲಿಕೆಯಿಂದ ಮೈಮರೆತು ಪುನಃ ಜೀವನವನ್ನು ಸಂಕಷ್ಟಕ್ಕೆ ಒಡ್ಡುವ ಬದಲು ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲಿಸಬೇಕು. ಕೋವಿಡ್ ಸೋಂಕು ಉಲ್ಬಣಗೊಳ್ಳದಂತೆ ಜಾಗರೂಕತೆಯಿಂದಿರಬೇಕೆಂದು ಸಾರ್ವಜನಿಕರಲ್ಲಿ ಶಾಸಕ ಕಾಮತ್ ಮನವಿ ಮಾಡಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss