ಹೊಸ ದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ (ಮಾ.05) ಐವರಿಗೆ ಕೊರೋನಾ ಸೋಂಕು ದೃಢ ಪಟ್ಟಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ಆರು ದಿನಗಳಿಂದ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿ ಒಂದಂಕೆಯಲ್ಲಿ ಮುಂದುವರಿದಿದೆ.
ಇದೇ ವೇಳೆ 9 ಮಂದಿ ಶನಿವಾರ ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ 1,33,541 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. ಶನಿವಾರ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,847 ಕೋವಿಡ್ ಸಾವು ಸಂಭವಿಸಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ ಸಕ್ರಿಯ ಪ್ರಕರಣಗಳು ಎರಡಂಕೆಗಳಿಗೆ ಇಳಿದಿದೆ. ಶನಿವಾರ 34 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ಶೇ.0.25ರಲ್ಲಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ