ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 298 ಕೊರೋನಾ ಪಾಸಿಟಿವ್

ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 298 ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.
24 ಮಂದಿ ಗುಣಮುಖರಾಗಿದ್ದಾರೆ. ಭಾನುವಾರ ಜಿಲ್ಲೆಯಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರ ಶೇ.2.89 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 117641ಕ್ಕೆ ಏರಿಕೆಯಾಗಿದೆ. ಈ ಪೈಕಿ 1267 ಸಕ್ರಿಯ ಪ್ರಕರಣಗಳು. 114669 ಮಂದಿ ಗುಣಮುಖರಾಗಿದ್ದಾರೆ. 1705 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 92348 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 11161030 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!