Friday, July 1, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 1191 ಮಂದಿಗೆ ಪಾಸಿಟಿವ್ ದೃಢ, ಐವರ ಬಲಿ

 ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ ಕೊರೋನಾ ಸೋಂಕಿಗೆ ಐವರು ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಮುಖವಾಗಿಯೇ ಸಾಗುತ್ತಿದ್ದು, ಸಕ್ರಿಯ ಕೇಸ್ ಸಂಖ್ಯೆ ಹತ್ತು ಸಾವಿರದ ಗಡಿ ದಾಟಿದೆ. ಗುರುವಾರ 1191 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, 271 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 51536ಕ್ಕೆ ಏರಿಕೆಯಾಗಿದೆ. ಈ ಪೈಕಿ 10246 ಸಕ್ರಿಯ ಪ್ರಕರಣಗಳು. 40517 ಮಂದಿ ಗುಣಮುಖರಾಗಿದ್ದಾರೆ. 773 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 51902 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 5423530 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss