ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 207 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
312 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಶನಿವಾರ ಐವರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಶನಿವಾರ ಜಿಲ್ಲೆಯಲ್ಲಿ ಶೇ. 1.83 ಪಾಸಿಟಿವಿಟಿ ದರ ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 109407 ಕ್ಕೆ ಏರಿಕೆಯಾಗಿದೆ. ಈ ಪೈಕಿ 2562 ಸಕ್ರಿಯ ಪ್ರಕರಣಗಳು. 105278 ಮಂದಿ ಗುಣಮುಖರಾಗಿದ್ದಾರೆ. 1564 ಸೋಂಕಿತರು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 86011 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 10456020 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.