ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 62 ಮಂದಿಗೆ ಕೋವಿಡ್ ಸೋಂಕು ದೃಢ

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ (ಫೆ.12) 62 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದೇ ವೇಳೆ 180 ಮಂದಿ ಶನಿವಾರ ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ 13,22,241 ಸೋಂಕಿನಿಂದ ಹೊರ ಬಂದಿದ್ದಾರೆ.
ಶನಿವಾರ 4 ಸಾವು ಸಂಭವಿಸಿದೆ. ಇದರಲ್ಲಿ ಇಬ್ಬರು ಹೊರ ಜಿಲ್ಲೆಯವರು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,823 ಕೋವಿಡ್ ಸಾವು ಸಂಭವಿಸಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ 840 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.1.08 ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!