ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ವರದಿ, ಮಂಗಳೂರು:
ಕಳೆದ ಮೂರ್ನಾಲ್ಕು ದಿನಗಳಿಗೆ ಹೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮಳೆ ಕೊಂಚ ಇಳಿಮುಖವಾಗಿತ್ತು.
ನಗರದಲ್ಲಿ ಇಡೀ ದಿನ ಬಿಟ್ಟು ಬಿಟ್ಟು ಮೋಡ ಮತ್ತು ಬಿಸಿಲಿನ ಕಣ್ಣಾಮುಚ್ಚಾಲೆಯೊಂದಿಗೆ ಸಾಮಾನ್ಯ ಮಳೆ ಸುರಿದಿದೆ. ಶುಕ್ರವಾರ ತಡರಾತ್ರಿಯಿಂದ ಶನಿವಾರ ಬೆಳಗ್ಗಿನವರೆಗೂ ಮಳೆ ಬಿದ್ದಿದೆ. ಮಳೆಯಿಂದಾಗಿ ಜಿಲ್ಲೆಯ ಅಲ್ಲಲ್ಲಿ ಹಾನಿ ಮುಂದುವರೆದಿದೆ. ಭಾರಿ ಮಳೆಗೆ ಬಂಟ್ವಾಳ ಮತ್ತು ಮುಲ್ಕಿ ತಾಲೂಕಿನಲ್ಲಿ ತಲಾ ಒಂದು ಮನೆ ಸಂಪೂರ್ಣ ಹಾನಿಗೀಡಾಗಿದೆ. ಮೂಡುಬಿದರೆ ತಾಲೂಕಿನಲ್ಲಿ ನಾಲ್ಕು ಮನೆ, ಮಂಗಳೂರು ಮತ್ತು ಬಂಟ್ವಾಳದಲ್ಲಿ ತಲಾ ಎರಡು ಮನೆ, ಬೆಳ್ತಂಗಡಿ, ಕಡಬ ತಾಲೂಕಿನಲ್ಲಿ ತಲಾ ಒಂದು ಮನೆಗೆ ಭಾಗಶಃ ಹಾನಿಯಾಗಿದೆ.
ಜಿಲ್ಲೆಯಲ್ಲಿ ಜುಲೈ 22ರವರೆಗೆ ಮಳೆ ಮುಂದುವರೆಯಲಿದ್ದು, ಜು.22ರಂದು ಬೆಳಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ 48 ಗಂಟೆ ಅವಧಿಯಲ್ಲಿ ಜಿಲ್ಲೆಯ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಲವಾದ ಮೇಲ್ಮೈ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶನಿವಾರ ಬೆಳಗ್ಗೆ ದೊರೆತ ಮಾಹಿತಿಯಂತೆ ಕಳೆದ 24 ಗಂಟೆ ಅವಧಿಯಲ್ಲಿ ದ.ಕ. ಜಿಲ್ಲೆಯ ವಿವಿಧ ಕಡೆ ಬಿದ್ದ ಮಳೆ ವಿವರ: (ಸೆ.ಮೀ.)
ಮಂಗಳೂರು-6, ಸುಬ್ರಹ್ಮಣ್ಯ-5, ಮಂಗಳೂರು ವಿಮಾನ ನಿಲ್ದಾಣ, ಮುಲ್ಕಿ-4, ಧರ್ಮಸ್ಥಳ, ಪಣಂಬೂರು-3, ಪುತ್ತೂರು, ಸುಳ್ಯ, ಬೆಳ್ತಂಗಡಿ, ಮೂಡುಬಿದಿರೆ-2.