Wednesday, August 10, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 183 ಮಂದಿಗೆ ಕೋವಿಡ್ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 183 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಭಾನುವಾರ ಒಬ್ಬರು ಮೃತ ಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
221 ಮಂದಿ ಸೋಂಕು ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ 2,107 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.1.7ಕ್ಕೆ ಏರಿಕೆ ಆಗಿದೆ.
ಜಿಲ್ಲೆಯಲ್ಲಿ ಈ ತನಕ ಒಟ್ಟು 1,10,058 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. 1,07,357 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 1,594 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.
ಈ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 86,714 ಮಾಸ್ಕ್ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿವೆ. ರೂ.1,05,53,370 ದಂಡ ವಸೂಲಿ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ಮುಂದುವರಿದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss