Tuesday, August 9, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 34 ಮಂದಿಯಲ್ಲಿ ಕೊರೋನಾ ಪಾಸಿಟಿವ್

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 34 ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ.
30 ಮಂದಿ ಗುಣಮುಖರಾಗಿದ್ದಾರೆ. ಭಾನುವಾರ ಕೊರೋನಾದಿಂದ ಯಾವುದೇ ಸಾವು ಸಂಭವಿಸಿಲ್ಲ. ಪಾಸಿಟಿವಿಟಿ ದರ ಶೇ.0.41 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 115286ಕ್ಕೆ ಏರಿಕೆಯಾಗಿದೆ. ಈ ಪೈಕಿ 286 ಸಕ್ರಿಯ ಪ್ರಕರಣಗಳು. 113322 ಮಂದಿ ಗುಣಮುಖರಾಗಿದ್ದಾರೆ. 1678ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 88385 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 10731470 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss