ಹೊಸ ದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 678 ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.
755 ಮಂದಿ ಗುಣಮುಖರಾಗಿದ್ದಾರೆ. ಗುರುವಾರ ಜಿಲ್ಲೆಯಲ್ಲಿ ಕೊರೋನಾದಿಂದ ನಾಲ್ವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 8.04 ದಾಖಲಾಗಿದೆ. ಜಿಲ್ಲೆಯಲ್ಲಿ ಗುರುವಾರ ಎರಡು ಕ್ಲಸ್ಟರ್ ಪ್ರಕರಣ ಗುರುತಿಸಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ130612 ಕ್ಕೆ ಏರಿಕೆಯಾಗಿದೆ. ಈ ಪೈಕಿ 5244 ಸಕ್ರಿಯ ಪ್ರಕರಣಗಳು. 123633 ಮಂದಿ ಗುಣಮುಖರಾಗಿದ್ದಾರೆ. 1735 ಮಂದಿ ಮೃತಪಟ್ಟಿದ್ದಾರೆ.
ಇದುವರೆಗೆ 94266 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 11403980 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.