Friday, July 1, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 580 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 580 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
625 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಮೃತಪಡುವವರ ಸಂಖ್ಯೆ ಏರುತ್ತಲೇ ಇದ್ದು, ಜಿಲ್ಲೆಯಲ್ಲಿ ಗುರುವಾರ ೮ ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಗುರುವಾರ ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.16 ಆಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 82174ಕ್ಕೆ ಏರಿಕೆಯಾಗಿದೆ. ಈ ಪೈಕಿ 6932ಸಕ್ರಿಯ ಪ್ರಕರಣಗಳು. 74272 ಮಂದಿ ಗುಣಮುಖರಾಗಿದ್ದಾರೆ. 969 ಮಂದಿ ಮೃತಪಟ್ಟಿದ್ದಾರೆ.
ಗುರುವಾರ ಜಿಲ್ಲೆಯಲ್ಲಿ ಕಪ್ಪು ಶಿಲೀಂಧ್ರ ಸೋಂಕಿನ ಮೂರು ಪ್ರಕರಣ ಪತ್ತೆಯಾಗಿದ್ದು, ಮೂವರೂ ರೋಗಿಗಳು ಹೊರಜಿಲ್ಲೆಯವರು. ಹೊರಜಿಲ್ಲೆಯ ಇಬ್ಬರು ಈ ಸೋಂಕಿಗೆ ಗುರುವಾರ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 54 ಬ್ಲ್ಯಾಕ್ ಫಂಗಸ್ ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಇದುವರೆಗೆ 62503 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 7339667 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss