ಹೊಸ ದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ (ನ.4) 16 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಗುರುವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಒಬ್ಬರು ಮೃತ ಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
25 ಮಂದಿ ಸೋಂಕು ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ 210 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ. 0.42 ಆಗುದೆ.
ಈ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 88,579 ಮಾಸ್ಕ್ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿವೆ. ರೂ.1,07,50,870 ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.