Friday, October 7, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 190 ಮಂದಿಗೆ ಕೊರೋನಾ ಪಾಸಿಟಿವ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………….

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 190 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
140 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಬುಧವಾರ ಆರು ಮಂದಿ ಸೋಂಕಿಗೆ ಬಲಿಯಾಗಿದ್ದು, ಶೇ. 2.40 ಪಾಸಿಟಿವಿಟಿ ದರ ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 97415ಕ್ಕೆ ಏರಿಕೆಯಾಗಿದೆ. ಈ ಪೈಕಿ 1956 ಸಕ್ರಿಯ ಪ್ರಕರಣಗಳು. 94078 ಸೋಂಕಿತರು ಗುಣಮುಖರಾಗಿದ್ದಾರೆ. 1381 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 81342 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 9908817 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ದ.ಕ. ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!