Thursday, July 7, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 217 ಮಂದಿಗೆ ಕೊರೋನಾ ಪಾಸಿಟಿವ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 217 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
321 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆರು ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಬುಧವಾರ ಜಿಲ್ಲೆಯಲ್ಲಿ ಶೇ. 2.04 ಪಾಸಿಟಿವಿಟಿ ದರ ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 108683 ಕ್ಕೆ ಏರಿಕೆಯಾಗಿದೆ. ಈ ಪೈಕಿ 2780 ಸಕ್ರಿಯ ಪ್ರಕರಣಗಳು. 104355 ಮಂದಿ ಗುಣಮುಖರಾಗಿದ್ದಾರೆ. 1548 ಸೋಂಕಿತರು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 85769 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 10431420 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss